ಬೆಳಗಾವಿ,ಜನವರಿ,19,2026 (www.justkannada.in): ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗರಂ ಆಗಿರುವ ಸಿಎಂ ಸಿದ್ದರಾಮಯ್ಯ ಈ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ರಾಸಲೀಲೆ ವಿಡಿಯೋ ವೈರಲ್ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನನಗೆ ಮುಂಜಾನೆ ಈ ವಿಚಾರ ಗೊತ್ತಾಗಿದೆ . ವಿಚಾರಣೆ ಮಾಡಿಸುತ್ತೇವೆ. ಅವರ ವಿರುದ್ದ ಶಿಸ್ತುಕ್ರಮ ಕೈಗೊಳ್ಳುತ್ತೇವೆ. ತಪ್ಪು ಮಾಡಿದ್ದರೆ ಶಿಸ್ತಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ಎಷ್ಟೇ ದೊಡ್ಡ ಅಧಿಕಾರಿ ಆಗಿದ್ದರೂ ಕಾನೂನಿಗಿಂತ ದೊಡ್ಡವರಲ್ಲ. ಈ ಬಗ್ಗೆ ವರದಿ ಪಡೆದು ರಾಮಚಂದ್ರರಾವ್ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Key words: CM Siddaramaiah, Disciplinary action, against, DGP, Ramachandra Rao







