ದಕ್ಷಿಣ ಕನ್ನಡ,ಸೆಪ್ಟಂಬರ್,1,2025 (www.justkannada.in): ಶ್ರೀ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ಇಂದು ಧರ್ಮಸ್ಥಳದ ಹೊರವಲಯದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಿದೆ.
ಮಧ್ಯಾಹ್ನ 2 ಗಂಟೆಗೆ ಸಮಾವೇಶ ಆರಂಭವಾಗಲಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಶೋಭಾ ಕರಂದ್ಲಾಜೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪಾಲ್ಗೊಳ್ಳಲಿದ್ದಾರೆ.
ಸಮಾವೇಶಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಶ್ರೀ ಮಂಜುನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು. ಬಿಜೆಪಿ ಮುಖಂಡರು ಸಾಥ್ ನೀಡಿದರು.
Key words: Dharmasthala, bjp, leaders, BY Vijayendra