ಧರ್ಮಸ್ಥಳ ಪ್ರಕರಣ: ಆರೋಪಿ ಚೆನ್ನಯ್ಯಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬೆಂಗಳೂರು,ಸೆಪ್ಟಂಬರ್,6,2025 (www.justkannada.in):  ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ  ಆರೋಪಿ ಚಿನ್ನಯ್ಯನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಳ್ತಂಗಡಿ ತಾಲ್ಲೂಕು ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿ ಚಿನ್ನಯ್ಯನ 15 ದಿನಗಳ ಎಸ್ ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಚಿನ್ನಯ್ಯನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ಭದ್ರತಾ ದೃಷ್ಠಿಯಿಂದ ಚಿನ್ನಯ್ಯನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Key words: Dharmasthala case, Accused, Chennaiah, judicial custody