Friday, September 18, 2026

BDA Apartments

ಧರ್ಮಸ್ಥಳ ಕೇಸ್​: ಮಹೇಶ್ ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್ BDA JK_Adv BDA Adv
Home Crime ಧರ್ಮಸ್ಥಳ ಕೇಸ್​: ಮಹೇಶ್ ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್

ಧರ್ಮಸ್ಥಳ ಕೇಸ್​: ಮಹೇಶ್ ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್

ಮಂಗಳೂರು, ಅಕ್ಟೋಬರ್, 25,2025 (www.justkannada.in): ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರಿಗೆ  ಎಸ್ ಐಟಿ ನೋಟಿಸ್ ನೀಡಿದೆ.

ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ.ಧರ್ಮಸ್ಥಳ ಕೇಸ್​ girish mattannanavar girish mattannanavr

ಈ ಸಂಬಂಧ ನೋಟಿಸ್ ನೀಡಿರುವ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮಾ, ವಿಚಾರಣೆಗೆ  ಹಾಜರಾಗದಿದ್ದರೆ ಬಂಧನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಬಿಎನ್ ಎಸ್ಎಸ್ 35(3) ಅಡಿಯಲ್ಲಿ ನೀಡಲಾದ ನೋಟಿಸ್‌ನಲ್ಲಿ, ಪ್ರಕರಣದ ಸಂದರ್ಭಗಳು ಮತ್ತು ಸಂಬಂಧಿತ ಸಂಗತಿಗಳನ್ನು ಖಚಿತಪಡಿಸಲು ಈ ನಾಲ್ವರ ಹಾಜರಾತಿ ಅಗತ್ಯವಿದ್ದುದಾಗಿ ವಿವರಿಸಲಾಗಿದೆ. ತನಿಖಾಧಿಕಾರಿಯು ನೋಟಿಸ್‌ನಲ್ಲಿ ಪ್ರಕರಣದ ಮಹತ್ವಪೂರ್ಣ ಅಂಶಗಳನ್ನು ಉಲ್ಲೇಖಿಸಿ, ಮಾಹಿತಿಯನ್ನು ದೃಢಪಡಿಸಲು ಅವರ ಸಹಕಾರವನ್ನು ಕೇಳಿದ್ದಾರೆ.

Key words: Dharmasthala case,  Notice, four , Mahesh Thimarodi