Wednesday, September 9, 2026

BDA Apartments

Home Front Page ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ದೊಡ್ಡ ಜಯ: ಭಾರತದ ಭವಿಷ್ಯ ಗೆದ್ದಿದೆ- ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ದೊಡ್ಡ ಜಯ: ಭಾರತದ ಭವಿಷ್ಯ ಗೆದ್ದಿದೆ- ರಾಹುಲ್ ಗಾಂಧಿ

ನವದೆಹಲಿ,ಜುಲೈ,25,2026 (www.justkannada.n):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇದು ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ದೊಡ್ಡ ಜಯ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.

ಈ ಕುರಿತು ಮಾತನಾಡಿದ ರಾಹುಲ್ ಗಾಂಧಿ,   ಇದು ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ದೊಡ್ಡ ಜಯ  ಇದು ವಿದ್ಯಾರ್ಥಿಗಳ ಜಯ.  ಭಾರತದ ಭವಿಷ್ಯ ಗೆದ್ದಿದೆ ಎಂದಿದ್ದಾರೆ.

ಶಿಕ್ಷಣ ವ್ಯವಸ್ಥೆಯನ್ನ ಹೈಜಾಕ್ ಮಾಡಲು ಆರ್ ಎಸ್ ಎಸ್ ಯತ್ನಿಸುತ್ತಿದೆ. ವಿದ್ಯಾರ್ಥಿಗಳ ಮೇಲಿನ ದಾಳಿಗೆ ಕೇಂದ್ರ ಗೃಹ ಸಚಿವ  ಅಮಿತ್ ಶಾ ನೇರ ಕಾರಣ .  ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಪ್ರಯೋಗ ಮಾಡಿದೆ. ಇದನ್ನೇ ನಾವು ಸಂಸತ್ತಿನಲ್ಲಿ ಚರ್ಚೆ ನಡೆಸುತ್ತೇವೆ.  ಪ್ರಧಾನಿ ಮೋದಿ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದರು.

Key words: Dharmendra Pradhan, resigns, big victory, students, Rahul Gandhi