Saturday, August 22, 2026

BDA Apartments

Home Front Page ಧೋನಿ ತಂದೆ-ತಾಯಿಗೂ ತಗುಲಿದ ಕೊರೊನಾ ಸೋಂಕು

ಧೋನಿ ತಂದೆ-ತಾಯಿಗೂ ತಗುಲಿದ ಕೊರೊನಾ ಸೋಂಕು

ಬೆಂಗಳೂರು, ಏಪ್ರಿಲ್ 21, 2021 (www.justkannada.in): ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತಾಯಿ ದೇವಕಿ ದೇವಿ ಮತ್ತು ತಂದೆ ಪಾನ್ ಸಿಂಗ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸದ್ಯ ಇಬ್ಬರನ್ನೂ  ರಾಂಚಿಯ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪೋಷಕರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದರಿಂದ ಧೋನಿ ಆತಂಕಕ್ಕೀಡಾಗಿದ್ದಾರೆ. ಸದ್ಯ ಧೋನಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುನ್ನಡೆಸುತ್ತಿದ್ದಾರೆ.