ಬೆಂಗಳೂರು, ಜನವರಿ,7,2026 (www.justkannada.in): ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ಸಂಬಂಧ ಎಸ್ಪಿ ಪವನ್ ನೆಜ್ಜೂರ ತಲೆದಂಡದ ಬೆನ್ನಲ್ಲೇ ಇದೀಗ ಬಳ್ಳಾರಿ ಡಿಐಜಿಪಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ವರ್ತಿಕಾ ಕಟಿಯಾರ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ನೇಮಿಸಲಾಗಿದೆ. ಬಳ್ಳಾರಿ ವಲಯದ ಐಜಿಪಿಯಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಕ ಮಾಡಲಾಗಿದೆ.
ಪವನ್ ನೆಜ್ಜೂರು ಅವರ ಅಮಾನತಿನಿಂದ ತೆರವಾಗಿದ್ದ ಎಸ್ಪಿ ಸ್ಥಾನಕ್ಕೆ ಡಾ. ಸುಮನ ಡಿ.ಪೆನ್ನೆಕರ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಸುಮನ್ನ ಡಿ.ಪನ್ನೇಕರ್ ಅವರು ಬೆಂಗಳೂರು ಗುಪ್ತಚರ ವಿಭಾಗದಲ್ಲಿ ಡಿಸಿಪಿಯಾಗಿದ್ದರು.
ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಪವನ್ ನೆಜ್ಜೂರ ಅವರನ್ನ ಸಸ್ಪೆಂಡ್ ಮಾಡಿತ್ತು.
Key words: Bellary DIGP Varthika Katiyar, Transfer







