ಡಿಕೆಶಿ ಅಣಕು ಶವಯಾತ್ರೆ : ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ 

ಬೆಂಗಳೂರು,ಮಾರ್ಚ್,28,2021(www.justkannada.in) : ರಮೇಶ್ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿ, ಡಿಕೆಶಿ ಅಣಕು ಶವಯಾತ್ರೆ ನಡೆಸುವ ಮೂಲಕ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

jk

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಗೋಕಾಕ್ ನಲ್ಲಿ  ರಮೇಶ್ ಜಾರಕಿಹೊಳಿ ಬೆಂಬಲಿಗರು ರಾಯಣ್ಣ ವೃತ್ತದಿಂದ, ಬಸವೇಶ್ವರ ವೃತ್ತದವರೆಗೆ ಡಿಕೆಶಿ ಅಣಕು ಶವಯಾತ್ರೆ ನಡೆಸಿ ಆಕ್ರೋಶವ್ಯಕ್ತಪಡಿಸಿದ್ದಾರೆ.

 

Dikeshi-mock-funeral-Protest-supporters-Ramesh Zarakiholi

ಡಿಕೆಶಿ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಪ್ರತಿಭಟನಕಾರರು ಆಕ್ರೋಶವ್ಯಕ್ತಪಡಿಸಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

key words : Dikeshi-mock-funeral-Protest-supporters-Ramesh Zarakiholi