Wednesday, July 29, 2026

BDA Apartments

Home Front Page ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ ದಿನೇಶ್ ಗುಂಡೂರಾವ್ ಗೆ ತಿರುಗೇಟು ನೀಡಿದ ಬಿಜೆಪಿ...

ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ ದಿನೇಶ್ ಗುಂಡೂರಾವ್ ಗೆ ತಿರುಗೇಟು ನೀಡಿದ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್…

ಬೆಂಗಳೂರು,ಜೂ,1,2019(www.justkannada.in): ಲೋಕಸಭಾ ಚುನಾವಣೆಯಲ್ಲಿ ಸೋಲು ಹಿನ್ನೆಲೆ  ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿ ಟ್ವಿಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಗೆ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.

ದಿನೇಶ್ ಟ್ವಿಟ್ ನಿಂದ ಅವರ ಬುದ್ದಿ ಮಟ್ಟ ಅರ್ಥವಾಗುತ್ತದೆ. ಇಷ್ಟು ದಿನ ಇಲ್ಲದ ಖ್ಯಾತೆಯನ್ನ ಈಗ ತೆಗೆದಿದ್ದಾರೆ. ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅಶ್ವಥ್ ನಾರಾಯಣ್,  ಇವಿಎಂ ಮೇಲೆ ಆರೋಪಿಸುವ ನೀವು ಅಂಧ್ರ, ತಮಿಳುನಾಡು, ಕೇರಳಾ ಫಲಿತಾಂಶದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ.  ಬೆಂಗಳೂರು ಗ್ರಾಮಾಂತರದಲ್ಲಿ ನಾನೇಕೆ ಸೋತೆ ಎಂದು ದಿನೇಶ್ ಗುಂಡೂರಾವ್ ಅವರಿಗೆ ಪ್ರಶ್ನಿಸಿದ್ದಾರೆ.

ಇವಿಎಂ  ಮೇಲೆ ಗಂಭೀರ ಆರೋಪ ಮಾಡಿರುವ ದಿನೇಶ್ ಗುಂಡೂರಾವ್, ಲೋಕಸಭೆ ಚುನಾವಣಾ ಫಲಿತಾಂಶದ ಬಗ್ಗೆ ತನಿಖೆಯಾಗಲಿ. ವಿವಿಪ್ಯಾಟ್ ತಾಳೆಯಾಗುತ್ತಿಲ್ಲ. ಈ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟಪಡಿಸಲಿ ಎಂದು ಟ್ವೀಟ್ ಮಾಡಿದ್ದಾರೆ.

Key words: Dinesh Gundoorao, who was suspicious of EVM:  BJP spokesperson Ashwath Narayan,outrage.

#DineshGundoorao # suspicious #EVM #BJPspokesperson #AshwathNarayan,