ಬೆಂಗಳೂರು, ಮೇ, 24,2025 (www.justkannada.in): ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆಯಿಂದ ದಾಖಲಾಗಿರುವ ರೋಗಿಗಳಿಂದ ಆಸ್ಪತ್ರೆ ಸಿಬ್ಬಂದಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಬೇಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಿ. ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಪಾಲಿಸಿ, ಮುಂಜಾಗ್ರತೆ ವಹಿಸಿದರೆ ಸಾಕು ಎಂದು ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಒಂದು ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್ ತೆಗೆದಿಡುವಂತೆ ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
Key words: Covid, Increase, State: covid Test, Minister, Dinesh Gundurao