ಬೆಂಗಳೂರು,ಆಗಸ್ಟ್,25,2025 (www.justkannada.in): ಪೋಷಕ ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಇಂದು ನಿಧನರಾಗಿದ್ದಾರೆ.
ಉಡುಪಿ ಜಿಲ್ಲೆ ಕುಂದಾಪುರದ ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಮಂಗಳೂರು ಚಿಕಿತ್ಸೆ ಫಲಿಸದೆ ಬೆಳಗಿನಜಾವ ಮೃತಪಟ್ಟಿದ್ದಾರೆ.
‘ಆ ದಿನಗಳು’, ‘ಕೆಜಿಎಫ್’ ( KGF) , ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.
ದಿನೇಶ್ ಮಂಗಳೂರು ಅವರು ಕಾಂತಾರ ಚಿತ್ರದ ಶೂಟಿಂಗ್ ವೇಳೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಒಂದು ವಾರದ ಹಿಂದೆ ಅವರು ಮತ್ತೆ ಅಸ್ವಸ್ಥರಾಗಿದ್ದು, ಅಂಕದಕಟ್ಟೆ ಸರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Key words: actor, Dinesh Mangalore, passes away