ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಶಿಸ್ತು ಕ್ರಮ.? ಸುಳಿವು ನೀಡಿದ ಶಾಸಕ ಸಾ.ರಾ.ಮಹೇಶ್.

ಮೈಸೂರು,ಡಿಸೆಂಬರ್,15,2021(www.justkannada.in):  ಕಾಂಗ್ರೆಸ್ ಸೇರ್ಪಡೆ ಬಗ್ಗೆ ಈಗಾಗಲೇ ಸುಳಿವು ನೀಡಿರುವ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರ ವಿರುದ್ಧ ಪಕ್ಷದಿಂದ ಶಿಸ್ತುಕ್ರಮ ಕೈಗೊಳ್ಳುವ ಕುರಿತು ಶಾಸಕ ಸಾ.ರಾ ಮಹೇಶ್ ಸುಳಿವು ನೀಡಿದ್ದಾರೆ.

ಹೌದು ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಈ ಕುರಿತು ಮಾತನಾಡಿರುವ ಶಾಸಕ ಸಾ.ರಾ ಮಹೇಶ್, ಹಿಂದೆ ನಡೆದ ಚುನಾವಣೆಗಳು, ಈಗ ನಡೆದ ಎಂಎಲ್‌ ಸಿ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡಿದ್ದಾರೆ.ನಮ್ಮಲ್ಲಿ ಇದ್ದುಕೊಂಡು ನಮ್ಮ‌ ವಿರುದ್ಧವೇ ಕೆಲಸ ಮಾಡಿದ್ದಾರೆ. ಇದನ್ನು ಪಕ್ಷ ಪರಿಗಣಿಸಿದೆ. ವಿಜೇತ ಅಭ್ಯರ್ಥಿ ಸಿ.ಎನ್.ಮಂಜೇಗೌಡ ವರಿಷ್ಠರನ್ನು ಭೇಟಿಯಾಗಲಿದ್ದಾರೆ.  ಚುನಾವಣೆಯ ವಿಚಾರಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ‌.  ಈಗಾಗಲೇ ಪಕ್ಷದ ವರಿಷ್ಠರು ಒಂದು ತೀರ್ಮಾನಕ್ಕೆ ಬಂದಿದ್ದಾರೆ. ಆ ತೀರ್ಮಾನ ಏನು ಅನ್ನೋದು ಇನ್ನು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.  ಇದುವರೆಗೂ ಅವರನ್ನು ನಮ್ಮ ನಾಯಕರು ಅನ್ನುತ್ತಿದ್ದೆ‌. ಈಗ ಶಾಸಕರು ಅನ್ನುತ್ತೇನೆ ಎಂದು  ಜಿ.ಟಿ ದೇವೇಗೌಡರ ವಿರುದ್ಧ ಕಿಡಿಕಾರಿದರು.

ನನ್ನನ್ನು ಸೇರಿದಂತೆ ನಮಗೆ ಜೆಡಿಎಸ್ ಅನಿವಾರ್ಯವೇ ಹೊರತು, ಜೆಡಿಎಸ್ ಗೆ ನಾವು ಅನಿವಾರ್ಯವಲ್ಲ ಎಂಬುದನ್ನು ಈ ಚುನಾವಣೆ ಫಲಿತಾಂಶ ತೋರಿಸಿದೆ. ಈಗಲಾದರೂ ಪಕ್ಷದಲ್ಲಿದ್ದುಕೊಂಡು ವಿರೋಧಿ ಕೆಲಸ ಮಾಡುತ್ತಿರುವವರು ಚಿಂತನೆ ಮಾಡಿ, ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ. ಪಕ್ಷ ವಿರೋಧಿ ಕೆಲಸ ಮಾಡುತ್ತಿರುವ ನಾಯಕರುಗಳು ಎಷ್ಟೇ ನೋವು ಕೊಟ್ಟರೂ ಅದನ್ನು ಕಾರ್ಯಕರ್ತರು ಸಹಿಸಿಕೊಂಡಿದ್ದಾರೆ. ಹಾಗಾಗಿ ಪಕ್ಷ ವಿರೋಧಿ ಕೆಲಸ ಮಾಡುತ್ತಿರುವ ನಾಯಕರು ಅರ್ಥ ಮಾಡಿಕೊಳ್ಳಿ. ನಾವು ನಿಮ್ಮನ್ನು ನಾಯಕರೆಂದು ಒಪ್ಪಿಕೊಂಡಿದ್ದೇವೆ. ನೀವು ಇತರರಿಗೆ ಮಾರ್ಗದರ್ಶನ ನೀಡಿ. ನೀವು ನಮ್ಮ ಪಕ್ಷದ ಚಿಹ್ನೆ, ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೀರಾ. ಹಾಗಾಗಿ ನೀವು ನಮ್ಮ ಪಕ್ಷದ ಪರವಾಗಿ ಕೆಲಸ ಮಾಡಿ. ಅವರ ಮನಸ್ಸು ಈಗಲಾದರೂ ಬದಲಾಗಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎಂದು  ಶಾಸಕ ಜಿ ಟಿ ದೇವೆಗೌಡರ ಹೆಸರು ಹೇಳದೇ ಶಾಸಕ ಸಾ ರಾ ಮಹೇಶ್ ಟಾಂಗ್ ನೀಡಿದರು.

ಸಂದೇಶ್ ನಾಗರಾಜ್ ವಿರುದ್ಧ ವಾಗ್ದಾಳಿ. 

ಇದೇ ವೇಳೆ ಸಂದೇಶ್ ನಾಗರಾಜ್ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಸಾ.ರಾ ಮಹೇಶ್,  12 ವರ್ಷ ಎಂಎಲ್‌ಸಿಯಾಗಿ, ಅವರ ಕುಟುಂಬದವರು ಮೇಯರ್ ಆಗಿ ಕೆಲಸ ಮಾಡಿದ್ದಾರೆ. ನಮ್ಮ ಪಕ್ಷಕ್ಕಾಗಿ ಅವರೂ ಕೆಲಸ ಮಾಡಿದ್ದರು.  ಪಕ್ಷ ಅವರ ದುಡಿಮೆಗಿಂತ ಹೆಚ್ಚು ಅವಕಾಶ ನೀಡಿದೆ.  ಹೀಗಿದ್ದೂ ನಮ್ಮ ವಿರುದ್ಧ ಯಾಕೆ ಮಾತನಾಡುತ್ತಾರೋ ಗೊತ್ತಿಲ್ಲ ಎಂದು ಕಿಡಿಕಾರಿದರು.

ವಿಧಾನ ಪರಿಷತ್ತು ಚುನಾವಣೆ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ಸಾ.ರಾ ಮಹೇಶ್, ನಾಮನಿರ್ದೇಶಿತ ಸದಸ್ಯರಿಗೆ ಮತ ಹಾಕುವ ಹಕ್ಕು ನೀಡಿದ್ದು ನಮ್ಮ ಪ್ರಾಯಾಸಕ್ಕೆ ಕಾರಣವಾಯ್ತು. ಕಳೆದ ಬಾರಿ ತಾಲೂಕು ಪಂಚಾಯಿತಿಯ 150, ಜಿಲ್ಲಾ ಪಂಚಾಯಿತಿಯ 21 ಸದಸ್ಯರಿದ್ದರು‌. ಈಗ ತಾ‌ಪಂ, ಜಿಪಂ ಸದಸ್ಯರಿಲ್ಲ. ಬಿಜೆಪಿ ಸರ್ಕಾರ ನಾಮನಿರ್ದೇಶಿತ ಸದಸ್ಯರಿಗೆ ಅವಕಾಶ ಮಾಡಿಕೊಟ್ಟಿತ್ತು. ಹೀಗಿದ್ದೂ ನಮಗೂ ಬಿಜೆಪಿಗೂ 139 ಮತಗಳ ಅಂತರ ಇತ್ತು. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮತ ಗಳಿಸಿದ್ದೇವೆ. ಇಲ್ಲಿ ವ್ಯಕ್ತಿ‌ ಮುಖ್ಯ ಅಲ್ಲ, ಪಕ್ಷ ಮುಖ್ಯ ಅನ್ನೊದು ಸಾಬೀತಾಗಿದೆ. ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು, ‌ಮತದಾರರು ನಮ್ಮ ಶಕ್ತಿ ತೋರಿಸಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಶಕ್ತಿ ಬಲಿಷ್ಠವಾಗಿದೆ ಎಂದು ಶಾಸಕ ಸಾರಾ ಮಹೇಶ್ ಹೇಳಿದರು.

Key words: Disciplinary action-against- MLA- GT Deve Gowda – MLA SARA Mahesh – hinted.

ENGLISH SUMMARY…

Disciplinary action against MLA G.T. Devegowda? MLA Sa.Ra. Mahesh gives clue
Mysuru, December 15, 2021 (www.justkannada.in): JDS MLA Sa.Ra. Mahesh has given a clue on the probability of initiating disciplinary action against MLA G.T. Degegowda, who has already given a clear clue of joining the Congress party officially.
Addressing a press meet in Mysuru today, he informed that the MLA G.T. Devegowda has worked against the JDS party in the earlier elections and the LC elections held recently. “He has backstabbed us, and the party has noticed it. Winning candidate C.N. Manjegowda will soon visit the party leaders to collect information about the election. The party leaders have also arrived at a decision, which will be disclosed in the coming days. Till now I used to address him as ‘our leader,’ but from now onwards I will call him as MLA,” he said.
Keywords: JDS/ MLA Sa. Ra. Mahesh/ G.T. Devegowda/ disciplinary action