ಬಿಜೆಪಿಯೇತರ ರಾಜ್ಯಗಳಿಗೆ ತಾರತಮ್ಯ: ಕೇಂದ್ರದ ವಿರುದ್ದ ಕಪ್ಪುಪತ್ರ ರಿಲೀಸ್ ಮಾಡಿ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ.

ನವದೆಹಲಿ,ಫೆಬ್ರವರಿ,8,2024(www.justkannada.in):  ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ನಿನ್ನೆ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಪ್ಪು ಪತ್ರ ಬಿಡುಗಡೆ ಮಾಡಿ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ವೈಪಲ್ಯಗಳ ಕುರಿತ ಕಪ್ಪು ಪತ್ರ ಬಿಡುಗಡೆ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರ ಎಂದಿಗೂ ನಿರುದ್ಯೋಗದ ಬಗ್ಗೆ ಮಾತನಾಡುವುದಿಲ್ಲ. ಕೇರಳ ಕರ್ನಾಟಕ ತೆಲಂಗಾಣ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ. ಬಿಜೆಪಿಯೇತರ ರಾಜ್ಯಗಳಿಗೆ ತಾರತಮ್ಯ ಮಾಡಲಾಗುತ್ತಿದೆ.

ಸಿಬಿಐ, ಐಟಿ,ಇಡಿಯನ್ನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ರಾಹುಲ್ ಗಾಂಧಿ ಯಾತ್ರೆಗೂ ಅಡ್ಡಿಪಡಿಸುವ ಕೆಲಸವಾಗುತ್ತಿದೆ. ಪ್ರಧಾನಿಯಾಗಿ ಮೋದಿ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಉದ್ಯೋಗ ಸೃಷ್ಠಿಸುವಲ್ಲಿ ವಿಫಲ, ಹಣದುಬ್ಬರ ತಡೆಯಲು ವಿಫಲವಾಗಿದೆ. ಕೇಂದ್ರ ಸರ್ಕಾರ ಕೆಲವು ಉದ್ಯಮಿಗಳ ಪರವಾಗಿದೆ ಎಂದು ಹರಿಹಾಯ್ದರು.

Key words: Discrimination-non-BJP- states- Mallikarjuna Kharge – release – black letter against -Centre.