Wednesday, August 12, 2026

BDA Apartments

Home Front Page ನಾಲ್ಕು ಸಚಿವ ಸ್ಥಾನ ಭರ್ತಿ ಬಗ್ಗೆ ವರಿಷ್ಠರ ಜತೆ ಚರ್ಚಿಸಿ ತೀರ್ಮಾನ-ಸಿಎಂ ಬಸವರಾಜ ಬೊಮ್ಮಾಯಿ.

ನಾಲ್ಕು ಸಚಿವ ಸ್ಥಾನ ಭರ್ತಿ ಬಗ್ಗೆ ವರಿಷ್ಠರ ಜತೆ ಚರ್ಚಿಸಿ ತೀರ್ಮಾನ-ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜನವರಿ,24,2022(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಮಧ್ಯೆ ಸಂಪುಟ ವಿಸ್ತರಣೆಗೆ  ಸಚಿವಾಕಾಂಕ್ಷಿಗಳು ಸಿಎಂ ಬೊಮ್ಮಾಯಿಗೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ,  ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ಯಾವಾಗ ಭರ್ತಿ ಮಾಡಬೇಕು ಎಂಬುದು ವರಿಷ್ಠರ ಗಮನದಲ್ಲಿದೆ. ಸಚಿವ ಸ್ಥಾನ ಭರ್ತಿ ಬಗ್ಗೆ ವರಿಷ್ಠರ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ. ವರಿಷ್ಠರು  ಕರೆದಾಗ ಹೋಗಿ ಮಾತನಾಡುತ್ತೇನೆ ಎಂದರು.

ನಿಗಮ ಮಂಡಳಿ ನೇಮಕದ ಬಗ್ಗೆಯೂ ಪಕ್ಷದಲ್ಲಿ ಚರ್ಚೆಯಾಗುತ್ತಿದೆ. ನಿಗಮ ಮಂಡಳಿ ಬಗ್ಗೆ ಇನ್ನೂ ಯಾವುದೇ ಪ್ರಸ್ತಾವನೆ ಬಂದಿಲ್ಲ. ಪಕ್ಷದ ನಾಯಕರಲ್ಲ ಚರ್ಚಿಸಿ ಪ್ರಸ್ತಾವನೆ ಸಲ್ಲಿಸುತ್ತಾರೆ. ಆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Discuss – ministerial- positions-CM Basavaraja Bommai.