Tuesday, September 22, 2026

BDA Apartments

ಬೆಂಬಲಿಗರ ಜತೆ ಸುದೀರ್ಘ ಚರ್ಚಿಸಿ ಮುಂದಿನ ನಿರ್ಧಾರ- ಸಿ.ಪಿ ಯೋಗೇಶ್ವರ್ BDA JK_Adv BDA...
Home Front Page ಬೆಂಬಲಿಗರ ಜತೆ ಸುದೀರ್ಘ ಚರ್ಚಿಸಿ ಮುಂದಿನ ನಿರ್ಧಾರ- ಸಿ.ಪಿ ಯೋಗೇಶ್ವರ್

ಬೆಂಬಲಿಗರ ಜತೆ ಸುದೀರ್ಘ ಚರ್ಚಿಸಿ ಮುಂದಿನ ನಿರ್ಧಾರ- ಸಿ.ಪಿ ಯೋಗೇಶ್ವರ್

ಬೆಂಗಳೂರು,ಅಕ್ಟೋಬರ್,22,2024 (www.justkannada.in):  ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ  ಮೈತ್ರಿ ಟಿಕೆಟ್ ಕೈತಪ್ಪುವ ಸಂಭವ ಹಿನ್ನೆಲೆಯಲ್ಲಿ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ಸಿ.ಪಿ ಯೋಗೇಶ್ವರ್  ತಮ್ಮ ಮುಂದಿನ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಿ.ಪಿ ಯೋಗೇಶ್ವರ್,  ನಿನ್ನೆ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇನೆ.  ಇಂದು ಬೆಂಬಲಿಗರ ಜೊತೆ ಸುದೀರ್ಘವಾಗಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ಸದ್ಯಕ್ಕೆ ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್, ನಾನು ಕಾಂಗ್ರೆಸ್ ಪಕ್ಷದ ಯಾವ ನಾಯಕರನ್ನೂ ಭೇಟಿ ಆಗಿಲ್ಲ. ನನ್ನನ್ನೂ ಯಾರೂ ಸಂಪರ್ಕ ಮಾಡಿಲ್ಲ ಎಂದರು.

ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂಬ ಹೇಳಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್,  ಇದು ಸಿಎಂ ದೊಡ್ಡಗುಣ ಎಂದರು.

Key words: discussion, next decision, CP Yogeshwar