ಮೇಲ್ಮನವಿ ಅರ್ಜಿ ವಜಾ: ಸುಪ್ರೀಂಕೋರ್ಟ್ ನಲ್ಲಿ ಮಾಜಿ ಸಚಿವ ಎಸ್.ಎ ರಾಮದಾಸ್ ಗೆ ಹಿನ್ನಡೆ.

ಮೈಸೂರು, ಸೆಪ್ಟೆಂಬರ್,7,2023(www.justkannada.in):  ಪ್ರೇಮಕುಮಾರಿ ಪ್ರಕರಣದಲ್ಲಿ ಮಾಜಿ ಸಚಿವ ಎಸ್‌.ಎ. ರಾಮದಾಸ್ ​ಗೆ  ಸುಪ್ರೀಂಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.  

ಪ್ರೇಮಕುಮಾರ್ ದಾಖಲಿಸಿದ್ದ ವಂಚನೆ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಮಾಜಿ ಶಾಸಕ ಎಸ್.ಎ ರಾಮದಾಸ್​​ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ.

2013ರಲ್ಲಿ ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆಂದು ಪ್ರೇಮಕುಮಾರಿ ಎನ್ನುವರು ಮಾಜಿ ಶಾಸಕ ಎಸ್.ಎ ರಾಮದಾಸ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ  ರಾಮದಾಸ್ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್​ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು.

ಇದನ್ನು ಪ್ರಶ್ನಿಸಿ ರಾಮದಾಸ್ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್  ಸಹ ಅರ್ಜಿಯನ್ನು ವಜಾಗೊಳಿಸಿದೆ. ಎಸ್.ಎ ರಾಮದಾಸ್ ವಿರುದ್ಧ ಬೆದರಿಕೆ, ಕೊಲೆ ಯತ್ನ ಸೇರಿ ಹಲವು ಆರೋಪ ಮಾಡಿ ಪ್ರೇಮಕುಮಾರಿ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Key words:  Dismissal – application- Former Minister- SA Ramdas – Supreme Court.