ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರ: ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ.

ಬೆಂಗಳೂರು,ಜುಲೈ,12,2023(www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ದ ಕಾಂಗ್ರೆಸ್ ನಾಯಕರು ಮೌನಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು  ಮೌನ​ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ  ಸಚಿವರುಗಳಾದ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.

Key words: Dismissal – application – Rahul Gandhi- Silent- protest -ongress.