Wednesday, October 7, 2026

BDA Apartments

immense respect BDA JK_Adv BDA Adv
Home Front Page ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು?

ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು?

ಬೆಂಗಳೂರು ,ಸೆಪ್ಟಂಬರ್,24,2024 (www.justkannada.in): ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಹಾಗೂ ಅವರ ಕುಟುಂಬದ ವಿರುದ್ದ ಷಡ್ಯಂತ್ರ ಮಾಡಿದ್ದಾರೆ. ನನ್ನ ಪ್ರಕಾರ ಸಿದ್ದರಾಮ್ಯಯ ಯಾವುದೇ ತಪ್ಪು ಮಾಡಿಲ್ಲ. ಕೋರ್ಟ್ ಆದೇಶದ ಪ್ರತಿ ನೋಡಿ ಪ್ರತಿಕ್ರಿಯಿಸುತ್ತೇನೆ ಎಂದರು.

ಯಾವುದೇ ತನಿಖೆ ಮಾಡಿದ್ರೂ ಸಿಎಂ ಸಿದ್ದರಾಮಯ್ಯ ಕ್ಲೀನ್ ಆಗಿ ಹೊರಬರುತ್ತಾರೆ. ಅವರು ಮಾಡಿರುವ ಕಾರ್ಯಕ್ರಮ, ಕೊಡುಗೆ ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು...

Key words: Dismissal, CM Siddaramaiah,, application, DCM, DK Shivakumar