Thursday, August 13, 2026

BDA Apartments

Home Front Page ಸಮ್ಮಿಶ್ರ ಸರ್ಕಾರ ಪತನಕ್ಕೆ ಈ ಇಬ್ಬರು ಕಾರಣ ಎಂದ ಅನರ್ಹ ಶಾಸಕ ಹೆಚ್.ವಿಶ್ವನಾಥ್…

ಸಮ್ಮಿಶ್ರ ಸರ್ಕಾರ ಪತನಕ್ಕೆ ಈ ಇಬ್ಬರು ಕಾರಣ ಎಂದ ಅನರ್ಹ ಶಾಸಕ ಹೆಚ್.ವಿಶ್ವನಾಥ್…

ನವದೆಹಲಿ,ಅ,25,2019(www.justkannada.in):  ಸಮ್ಮಿಶ್ರ ಸರ್ಕಾರ ಪತನಕ್ಕೆ ಮಾಜಿ ಸಿಎಂಗಳಾದ ಸಿದ್ಧರಾಮಯ್ಯ ಮತ್ತು ಹೆಚ್.ಡಿ ಕುಮಾರಸ್ವಾಮಿ ಇಬ್ಬರೂ ಕಾರಣ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಮಾತನಾಡಿದ ಅನರ್ಹ ಶಾಸಕ ಹೆಚ್.ವಿಶ್ವನಾಥ್,  ಸಮ್ಮಿಶ್ರ ಸರ್ಕಾರ ಪತನಕ್ಕೆ ಹೆಚ್.ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಸಮಬಲರು. ಸಿದ್ಧರಾಮಯ್ಯ ಕಾಂಗ್ರೆಸ್ ಶಾಸಕರನ್ನ ಕೇಳಲಿಲ್ಲ. ಕುಮಾರಸ್ವಾಮಿ ಜೆಡಿಎಸ್ ಶಾಸಕರನ್ನ ಕೇಳಲಿಲ್ಲ. ಯಾರನ್ನ ಕೇಳದೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿದರು. ಹೀಗಾಗಿ ಸಮ್ಮಿಶ್ರ ಸರ್ಕಾರ ಪತನವಾಯಿತು. ಪಕ್ಷ ರಾಜಕಾರಣವಿಲ್ಲದಿರುವುದರಿಂದ ಪಕ್ಷಾಂತರ ಎಂದು ಹೇಳಿದರು.

ಅನರ್ಹ ಶಾಸಕರ ಅರ್ಜಿ ವಿಚಾರಣೆ ಇಂದು ಸಹ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದ್ದು ಕಾಂಗ್ರೆಸ್ ಪರ ಕಪಿಲ್ ಸಿಬಲ್ ಇಂದು ವಾದ ಮಂಡಿಸುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ.

Key words: disqualified MLA -H.Vishwanath -blamed – two – collapse – coalition government.