Thursday, September 17, 2026

BDA Apartments

Home Front Page ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಒತ್ತಾಯ:  ದಿಢೀರ್ ಪ್ರತಿಭಟನೆ…

ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಒತ್ತಾಯ:  ದಿಢೀರ್ ಪ್ರತಿಭಟನೆ…

ಮೈಸೂರು,ಫೆ,1,2020(www.justkannada.in): ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಒತ್ತಾಯಿಸಿ ಮೈಸೂರು ಮಹಾರಾಣಿ ಕಲಾ ಕಾಲೇಜಿನ ವಿದ್ಯಾರ್ಥಿಗಳು  ದಿಢೀರ್ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಜಮಾಯಿಸಿದ ಮಹಾರಾಣಿ ಕಲಾ ಕಾಲೇಜಿನ ವಿದ್ಯಾರ್ಥಿನೀಯರು  ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು  ಎರಡನೇ ವರ್ಷ, ಮೂರನೇ ವರ್ಷದ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ನೀಡುವಂತೆ ಒತ್ತಾಯ ಮಾಡಿದರು.

ಮಾಜಿ ಸಿ ಎಂ ಕುಮಾರಸ್ವಾಮಿ ಕಳೆದ ವರ್ಷ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವ ಭರವಸೆ ನೀಡಿದ್ದರು.  ಆದರೆ ಭರವಸೆ ಈಡೆರಿಸದ ಹಿನ್ನಲೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದು  ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Key words: distributing -laptops – all -graduate students-protest-mysore