ಮಲೈ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆಯ ಚೆಕ್ ವಿತರಣೆ…

ಬೆಂಗಳೂರು, ಜೂ,11,2020(www.justkannada.in):  ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಇಂದು ಒಟ್ಟು  64,07,974 ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ನೀಡಲಾಯಿತು.

ಮಲೈ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 50 ಲಕ್ಷ ರೂ.ಗಳು,   ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ  ಅಧಿಕಾರಿಗಳು ಮತ್ತು ನೌಕರರ 3 ದಿನಗಳ ವೇತನ 10 ಲಕ್ಷ ರೂ.ಗಳು ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಿವೃತ್ತ ಅಧಿಕಾರಿಗಳು ಮತ್ತು ನೌಕರರ ಒಂದು ದಿನದ ಪಿಂಚಣಿ 2,15,158 ರೂಗಳು  ಹಾಗೂ ಗ್ರಾಮೋದ್ಯೋಗ ಮಂಡಳಿಯ ಅಧಿಕಾರಿಗಳು ಮತ್ತು ನೌಕರರ ಒಂದು ದಿನದ ವೇತನ  1,92,816  ರೂ.ಗಳ ಚೆಕ್  ಅನ್ನು  ಸಹ ಹಸ್ತಾಂತರ ಮಾಡಲಾಯಿತು.Distribution – check-Kovid 19 -Relief Fund - Chief Ministers

ಮುಜರಾಯಿ ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು,  ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Key words: Distribution – check-Kovid 19 -Relief Fund – Chief Ministers