ಕಾರ್ಯನಿರತ ಪತ್ರಕರ್ತರಿಗೆ ‘ಮಾಧ್ಯಮ ಆರೋಗ್ಯ ಕಾರ್ಡ್’ ವಿತರಣೆ…

0
542

ಬೆಂಗಳೂರು,ಆ,26,2020(www.justkannada.in):  ರಾಜ್ಯದಲ್ಲಿ ಕಾರ್ಯನಿರತ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಮಣಿಪಾಲ್ ಆಸ್ಪತ್ರೆ ಮಾಧ್ಯಮ ಆರೋಗ್ಯ ಕಾರ್ಡ್ ನೀಡಲು ಮುಂದಾಗಿದೆ.distribution-media-health-card-working-journalists-manipal-hospital

ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಣಿಪಾಲ್ ಹಾಸ್ಪಿಟಲ್ ಸಂಸ್ಥೆಯ ಛೇರ್ಮನ್ ಡಾ.ಸುದರ್ಶನ್ ಬಲ್ಲಾಳ್ ಅವರು ಸಾಂಕೇತಿಕವಾಗಿ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಮಾಧ್ಯಮ ಆರೋಗ್ಯ ಕಾರ್ಡ್ ಹಸ್ತಾಂತರಿಸಿದರು.distribution-media-health-card-working-journalists-manipal-hospital

ಕಾರ್ಯ ನಿರತ ಪತ್ರಕರ್ತರಿಗಾಗಿ ಚಿಕಿತ್ಸಾ ಸೌಲಭ್ಯದಲ್ಲಿ ಶೇ.20 ರಷ್ಟು ರಿಯಾಯಿತಿ ನೀಡಲು ಮಣಿಪಾಲ್ ಆಸ್ಪತ್ರೆ ಒಪ್ಪಿಗೆ ಸೂಚಿಸಿದ್ದು ಇದಕ್ಕಾಗಿ ಮಾಧ್ಯಮ ಆರೋಗ್ಯ ಕಾರ್ಡ್ ನೀಡಲು ಮುಂದಾಗಿದೆ. ಜಿಲ್ಲಾ ಮಟ್ಟದಲ್ಲಿಯೂ ಈ ಕಾರ್ಡ್ ವಿತರಣಾ ಕಾರ್ಯಕ್ರಮ ಹಂತ ಹಂತವಾಗಿ ನಡೆಯಲಿದೆ ಎಂದು ಶಿವಾನಂದ ತಗಡೂರು ತಿಳಿಸಿದ್ದಾರೆ.

Key words: Distribution – media health card- working- journalists-manipal hospital