15 ದಿನಗಳಿಗೊಮ್ಮೆ ಜಿಲ್ಲಾ ಪ್ರವಾಸ ಮಾಡುವೆ- ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಮೇ,28,2021(www.justkannada.in):  15 ದಿನಗಳಿಗೊಮ್ಮೆ ಜಿಲ್ಲಾ ಪ್ರವಾಸ ಮಾಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.jk

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಢಿದ ಸಿಎಂ ಬಿಎಸ್ ಯಡಿಯೂರಪ್ಪ. ಕೊರೋನಾ ಸೋಂಕು ಹೆಚ್ಚಿರುವ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವೆ. ಸಚಿವರು, ಶಾಸಕರ ಜತೆ ಚರ್ಚಿಸಿ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ಇಂತಹ ಅಮಾನವೀಯ ಘಟನೆಯನ್ನ ಸಹಿಸಲು ಆಗುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Key words: District tours -every -15 days- CM- BS Yeddyurappa.