ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣ: ಸಿಬಿಐ ಮತ್ತು ಎನ್ ಐಎ ತನಿಖೆ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ…..

ಬೆಂಗಳೂರು,ಆ,17,2020(www.justkannada.in):  ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಎನ್ ಐಎ ತನಿಖೆಗ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದರು.jk-logo-justkannada-logo

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ,  ಪ್ರಕರಣ ಸಂಬಂಧ ಸದ್ಯ ಒಂದೇ ತನಿಖಾ ತಂಡದಿಂದ ತನಿಖೆ ನಡೆಯುತ್ತಿದೆ. ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಸಿಬಿಐ ಮತ್ತು ಎನ್ ಐಎ ತನಿಖೆ ಕುರಿತು ಚರ್ಚೆಯಾಗಿಲ್ಲ ಎಂದು ತಿಳಿಸಿದರು.

ಗಲಭೆಕೋರರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು. ಇನ್ನು ಗಲಭೆ ವೇಳೆ ಆಸ್ತಿ ಪಾಸ್ತಿ ನಷ್ಟ ಮಾಡಿದವರಿಂದಲೇ ವಸೂಲಿ ಮಾಡಲಾಗುವುದು. ಈ ಸಂಬಂಧ ಎಜಿ ಬಳಿ ಸಿಎಂ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Key words:  DJ halli-KG halli riot case-Home Minister -Basavaraja Bommai- clarifies