ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ಖಂಡನೆ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ  ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಆಗ್ರಹ…

ಬೆಂಗಳೂರು,ಆ,12,2020(www.justkannada.in):  ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿ ನಡೆದ ಗಲಭೆ ವೇಳೆ ವರದಿ ಮಾಡಲು ಹೋಗಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿ, ವಾಹನ ಜಖಂ ಮಾಡಿರುವುದು ಖಂಡನೀಯ. ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಿ  ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.jk-logo-justkannada-logo

ಡಿ.ಜಿ.ಹಳ್ಳಿ ಪ್ರಕರಣದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು, ಬೆಂಗಳೂರಿನ  ದೇವರ ಜೀವನ ಹಳ್ಳಿ (ಡಿ ಜಿ ಹಳ್ಳಿ) ಪ್ರಕರಣದಲ್ಲಿ ವರದಿ ಮಾಡಲು ಹೋಗಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿ, ವಾಹನ ಜಖಂ ಮಾಡಿರುವುದು ಖಂಡನೀಯ. ಸಂಬಂಧಿಸಿದ ಹಲ್ಲೆಕೋರರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು, ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಆಗ್ರಹಿಸಿದರು.dj-halli-riot-case-condemnation-assault-media-karnataka-working-journalists-association

Key words: DJ halli- riot case-Condemnation -assault – media – Karnataka Working Journalists Association