ಗಲಭೆ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ನಿಶ್ಷಿತ- ಘಟನೆ ಖಂಡಿಸಿ ಸಿಎಂ ಬಿಎಸ್ ವೈ ಟ್ವೀಟ್…

ಬೆಂಗಳೂರು,ಆ,11,2020(www.justkannada.in): ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ  ವ್ಯಾಪ್ತಿಯಲ್ಲಿ ನಡೆದ ಗಲಭೆಯನ್ನ ಖಂಡಿಸಿರುವ ಸಿಎಂ ಬಿಎಸ್  ಯಡಿಯೂರಪ್ಪ ಘಟನೆಗೆ ಕಾರಣರಾದ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ ಎಂದು ತಿಳಿಸಿದ್ದಾರೆ.dj-halli-riot-case-defamation-action-against-perpetrators-prohibited-cm-bs-yeddyurappa

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ,  ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸರ ಮನೆ ಹಾಗೂ ಪೋಲೀಸ್ ಠಾಣೆ ಮೇಲೆ ದಾಳಿ‌ ಮಾಡಿ ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ  ಎಂದು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಎಂದು ಯಡಿಯೂರಪ್ಪ ಮತ್ತೊಂದು ಟ್ವೀಟ್​​ನಲ್ಲಿ ಮನವಿ ಮಾಡಿದ್ದಾರೆ.dj-halli-riot-case-defamation-action-against-perpetrators-prohibited-cm-bs-yeddyurappa

ಕಾಂಗ್ರೆಸ್​​ ಶಾಸಕ ಅಖಂಡ ಶ್ರೀನಿವಾಸ್‌ ಸಂಬಂಧಿಯೊಬ್ಬರು ಫೇಸ್​​ಬುಕ್​​ನಲ್ಲಿ  ವಿವಾದಿತ ಪೋಸ್ಟ್​​ ಹಾಕಿದ್ದರು ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪೊಂದು ನಿನ್ನೆ ತಡರಾತ್ರಿ ಗಲಭೆ ನಡೆಸಿದ್ದು ಬೆಂಗಳೂರು ಪೊಲೀಸರು ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದಾರೆ.

Key words: dj Halli -riot case -Defamation action- against -perpetrators –prohibited-CM BS yeddyurappa