ಡಿಕೆಶಿ ಬಂಧನ ರಾಜಕೀಯ ಪ್ರೇರಿತ: ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ-ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಕಿಡಿ…

0
330

ಹಾಸನ,ಸೆ.4,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನ ಬಂಧಿಸಿರುವುದು ರಾಜಕೀಯ ಪ್ರೇರಿತವಾದದ್ದು. ಕೇಂದ್ರ ಸರ್ಕಾರ ಇಡಿ ಮತ್ತು ಐಟಿ ಸಂಸ್ಥೆಗಳನ್ನ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಕಿಡಿಕಾರಿದರು.

ಇಡಿಯಿಂದ ಡಿ.ಕೆ ಶಿವಕುಮಾರ್ ಬಂಧನ ಕುರಿತು ಹಾಸನದಲ್ಲಿ ಮಾತನಾಡಿದ ಹೆಚ್.ಕೆ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಬಂಧನ ದುರದೃಷ್ಟಕರ. ಡಿ.ಕೆ.ಶಿವಕುಮಾರ್ ಬಂಧನವನ್ನು ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಗೆ ನಮ್ಮ ಪಕ್ಷ ಬೆಂಬಲ ನೀಡಲಿದೆ ಎಂದರು.

ಕಾನೂನಿಗೆ ಗೌರವ ನೀಡಿ ಡಿ.ಕೆ ಶಿವಕುಮಾರ್ ನಾಲ್ಕು ದಿನಗಳ ಕಾಲ ವಿಚಾರಣೆಗೆ ಸಹಕರಿಸಿದ್ದಾರೆ. ಆದರೂ ಅವರನ್ನು ಬಂಧಿಸಿರುವುದು ರಾಜಕೀಯ ಪ್ರೇರಿತ. ಕೇಂದ್ರ ಸರ್ಕಾರ ಇಡಿ ಐಟಿ ಸಂಸ್ಥೆಗಳನ್ನ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವದ ವಿರೋಧಿ ಕ್ರಮವಾಗಿದೆ. ಕಾನೂನು ರೀತಿ ವಿಚಾರಣೆ ನಡೆಸಲು ಯಾರ ಅಭ್ಯಂತರವೂ ಇಲ್ಲ ಎಂದು ಹೆಚ್.ಕೆ ಕುಮಾರಸ್ವಾಮಿ ನುಡಿದರು.

Key words: DK shivakumar -arrest – politically -motivated- JDS President -HK Kumaraswamy