Sunday, August 9, 2026

BDA Apartments

Home Front Page ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆ ಅಂತ್ಯ, ಆದೇಶ ಕಾಯ್ದಿರಿಸಿದ...

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆ ಅಂತ್ಯ, ಆದೇಶ ಕಾಯ್ದಿರಿಸಿದ ಕೋರ್ಟ್.

ಬೆಂಗಳೂರು,ಏಪ್ರಿಲ್,17,2023(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಅಂತ್ಯವಾಗಿದ್ದು ಹೈಕೋರ್ಟ್ ಆದೇಶವನ್ನ ಕಾಯ್ದಿರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸರ್ಕಾರದ ಅನುಮತಿ ಪ್ರಶ್ನಿಸಿ  ಡಿಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.  ಅರ್ಜಿಯ ವಿಚಾರಣೆ ಅಂತ್ಯವಾಗಿದ್ದು ಡಿ.ಕೆ ಶಿವಕುಮಾರ್ ಮತ್ತು ಸಿಬಿಐ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್  ನ್ಯಾ. ಕೆ. ನಟರಾಜನ್ ಅವರಿದ್ದ ಪೀಠ ಇಂದು ಆದೇಶವನ್ನ ಕಾಯ್ದಿರಿಸಿದೆ.

ಹಾಗೆಯೇ ಸಿಬಿಐ ತನಿಖೆಗೆ ಇದ್ದ ತಡೆಯಾಜ್ಞೆಯನ್ನೂ ಹೈಕೋರ್ಟ್ ವಿಸ್ತರಣೆ ಮಾಡಿದೆ.

Key words:  DK shivakumar- case-CBI-trial- order- reserved -Court.