ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟಪಡಿಸಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅವರನ್ನ ಆಯ್ಕೆ ಮಾಡಲಾಯಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಸಿ ವೇಣುಗೋಪಾಲ್, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರ ಹೆಸರನ್ನ ಅಧಿಕೃತ ಮಾಡಿದೆ. ಹೈಕಮಾಂಡ್ ನಿರ್ಣಯವನ್ನ ಸಿದ್ದರಾಮಯ್ಯ ಘೋಷಿಸಿದ್ದಾರೆ ಎಂದರು.
ಸಿಎಲ್ ಪಿ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಸಿದ್ದರಾಮಯ್ಯ ಘೋಷಣೆ ಮಾಡಿದರು ಪರಮೇಶ್ವರ್ ಅದನ್ನು ಅನುಮೋದಿಸಿದರು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಈ ಮಧ್ಯೆ ದೊಡ್ಡ ಕೋಲಾಹಲವೇ ನಡೆಯುತ್ತೆ ಎಂದು ಭಾವಿಸಿದ್ದರು. ಆದರೆ ನಾವೆಲ್ಲರೂ ಒಂದೇ ಕುಟುಂಬದಂತೆ ನಿರ್ಣಯ ಮಾಡಿದ್ದೇವೆ ಎಂದು ಕೆಸಿ ವೇಣುಗೋಪಾಲ್ ತಿಳಿಸಿದರು.
Key words: DK Shivakumar, elected, CLP, leader , KC Venugopal







