ಬೆಂಗಳೂರು,ಮೇ,29,2026 (www.justkannada.in): ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರಂದು ತಿಳಿಯುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಚಲುವರಾಯಸ್ವಾಮಿ, ಡಿಕೆ ಶಿವಕುಮಾರ್ ಸಿಎಂ ಆಗಾತ್ತಾರೆಂಬ ವಿಚಾರ ಗೊತ್ತಾಗುತ್ತಿದ್ದಂತೆ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಮನೆಮಾಡಿದೆ. ಒಕ್ಕಲಿಗರಿಗೆ ನಾವೇ ನಾಯಕರು ಅಂದುಕೊಡಿದ್ದರು. ಒಕ್ಕಲಿಗ ಸಮುದಾಯ ಡಿಕೆ ಶಿವಕುಮಾರ್ ಅವರನ್ನೂ ಬೆಂಬಲಿಸಿದೆ. ಡಿಕೆ ಶಿವಕುಮಾರ್ ಒಕ್ಕಲಿಗರಿಗಷ್ಟೇ ಅಲ್ಲ ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿದ್ದಾರೆ ಎಂದರು.
ಸಿದ್ದರಾಮಯ್ಯನವರು ಕೂಡ ಚಕಾರ ಎತ್ತದೆ ರಾಜೀನಾಮೆ ನೀಡಿದ್ದಾರೆ. ಸಿದ್ದರಾಮಯ್ಯ. ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ. ರಾಜ್ಯಸಭೆಗೆ ಹೋಗಲ್ಲ ಎಂದು ಅವರೇ ಹೇಳಿದ್ದಾರೆ ಎಂದು ಚಲುವರಾಯಸ್ವಾಮಿ ತಿಳಿಸಿದರು.
Key words: DK Shivakumar, become, CM, Deve Gowda, house, Chaluvarayaswamy







