ರಾಮನಗರ,ಫೆಬ್ರವರಿ,6,2026 (www.justkannada.in): ರಾಜ್ಯದಲ್ಲಿ ಮತ್ತೆ ಕುರ್ಚಿ ಕಿತ್ತಾಟದ ವಿಚಾರ ಮುನ್ನೆಲೆಗೆ ಬಂದಿದ್ದು ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ. ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಿಕೆ ನೀಡಿದ್ದ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ಇಕ್ಬಾಲ್ ಹುಸೇನ್, ಡಿಕೆ ಶಿವಕುಮಾರ್ ಸಿಎಂ ಆಗಬೇಕು ಆಗೇ ಆಗುತ್ತಾರೆ. ಇದೇ ಅವಧಿಯಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ನನ್ನ ಡೇಟ್ ಮಿಸ್ ಆಗಿದೆ. 3ನೇ ಡೇಟ್ ಮಿಸ್ ಆಗಲು ಬಿಡಲ್ಲ ಎಂದಿದ್ದಾರೆ.
ಶಾಸಕರು ಒಗ್ಗಟ್ಟಾಗಿ ಏನು ಮಾಡಬೇಕು. ಹೈಕಮಾಂಡ್ ಗೆ ಏನು ಸಂದೇಶ ಕೊಡಬೇಕೆಂದು ತೀರ್ಮಾನಿಸುತ್ತೇವೆ. ಭಗವಂತನ ಸನ್ನಿಧಿಯಲ್ಲಿ ನಿಂತು ಹೇಳುತ್ತಿದ್ದೇನೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.
Key words: DK Shivakumar, become CM, Congress, MLA







