ಕಾವೇರಿ ನೀರು ವಿಚಾರವಾಗಿ ರಾಜಕೀಯ ಮರೆತು ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧಾರ-ಡಿಸಿಎಂ ಡಿ.ಕೆ ಶಿವಕುಮಾರ್.

ನವದೆಹಲಿ,ಸೆಪ್ಟಂಬರ್,20,2023(www.justkannada.in): ಕಾವೇರಿ ನದಿ ನೀರು ವಿಚಾರವಾಗಿ  ಎಲ್ಲರೂ ರಾಜಕೀಯ ಮರೆತು ಒಗ್ಗಟ್ಟು ಪ್ರದರ್ಶನಕ್ಕೆ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಕಾವೇರಿ ನದಿ ನೀರು ವಿಚಾರವಾಗಿ ನವದೆಹಲಿಯಲ್ಲಿ ರಾಜ್ಯದ ಸಂಸದರು, ಕೇಂದ್ರ ಸಚಿವರು ಜನಪ್ರತಿನಿಧಿಗಳ ಸಭೆ ನಡೆಸಿದ ಬಳಿಕ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ರಾಜಕೀಯ ಮರೆತು ಎಲ್ಲರೂ ಒಗ್ಗಟ್ಟಾಗಿದ್ದೇವೆ.  ಸಂಜೆ  4 ಗಂಟೆಗೆ ಜಲಶಕ್ತಿ ಸಚಿವರನ್ನ ಭೇಟಿ ಮಾಡಲಿದ್ದೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words: DK Shivakumar- decided – solidarity – Cauvery water- issue