ಡಿ.ಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಇಡಿಯಿಂದ ಸಮನ್ಸ್.

ಹುಬ್ಬಳ್ಳಿ,ನವೆಂಬರ್,8,2022(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇದೀಗ ಮತ್ತೆ ಸಂಕಷ್ಟ ಎದುರಾಗಿದ್ದು ನವೆಂಬರ್ 14 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಡಿ.ಕೆ ಶಿವಕುಮಾರ್, ನವೆಂಬರ್ 14 ರಂದು ವಿಚಾರಣೆಗೆ ಬರುವಂತೆ ಇಡಿ ಸಮನ್ಸ್ ಬಂದಿದೆ.  ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಇದ್ದಾಗಲೇ ಮತ್ತೆ ಬುಲಾವ್ ಬಂದಿದೆ.  ನೆಹರು ಜಯಂತಿಯಂದೇ ವಿಚಾಣೆಗೆ ಕರೆದಿದ್ದಾರೆ.  ಯಾರೆ ಆದರೂ ಕಾನೂನಿಗೆ ಗೌರವ ಕೊಡಬೇಕು ಎಂದರು.

ಇಡಿ ಸಮನ್ಸ್ ಬಗ್ಗೆ ನಮ್ಮ ವಕೀಲರ ಜೊತೆ ಚರ್ಚೆ ಮಾಡುತ್ತೇನೆ. ನಿನ್ನೆ ನನ್ನ ತಮ್ಮ,  ಸಂಸದ ಡಿಕೆ ಸುರೇಶ್ ವಿಚಾರಣೆಗೆ ಹಾಜರಾಗಿದ್ದರು.  ಅಲ್ಲಿ ಏನಾಯಿತು ಎಂಬುದರ ಬಗ್ಗೆ ಡಿ.ಕೆ ಸುರೇಶ್ ಜೊತೆ ಚರ್ಚಿಸುತ್ತೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

Key words: DK Shivakumar-ED – Summons – attend -hearing