ಸಿ.ಟಿ ರವಿ ವಿರುದ್ಧ ಕೇಸ್ ದಾಖಲಿಸಲು ಡಿ.ಕೆ ಶಿವಕುಮಾರ್ ಆಗ್ರಹ.

ಬೆಂಗಳೂರು,ನವೆಂಬರ್,28,2022(www.justkannada.in):  ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದರೇ ಹಿಂದೂಗಳ ಹತ್ಯೆ ನಡೆಯುತ್ತದೆ ಎಂದು ಹೇಳಿಕೆ ನೀಡಿದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದರು.

ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ಸಿಟಿ ರವಿ ಹಿಂದೂ ಹತ್ಯೆ ಎಂದು ಯಾವ ಆಧಾರದ ಮೇಲೆ ಹೇಳುತ್ತಾರೆ. ಸಿ.ಟಿ ರವಿ ಮೇಲೆ ಪ್ರಚೋದನಾಕಾರಿ ಕೇಸ್ ಹಾಕಿ. ರಾಜ್ಯದಲ್ಲಿ ಅಶಾಂತಿ ಮೂಡಿಸುವ ಕೆಲಸ ವಾಗುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ.

ಭ್ರಷ್ಟಾಚಾರ ಮತಗಳ್ಳತನ ಮುಚ್ಚಿ ಹಾಕುವ ಹುನ್ನಾರ ನಡೆಯುತ್ತಿದೆ. ರಾಜ್ಯದಲ್ಲಿ ದಿವಾಳಿ ಆಡಳಿತ ನಡೆಯುತ್ತಿದೆ. ಪ್ರತಿ ಹಳ್ಳಿಯಲ್ಲೂ ಕೋಮುಗಲಭೆ ಸೃಷ್ಠಿಸುತ್ತಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು.

Key words: DK Shivakumar – file – case- against -CT Ravi.