Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಡಿಕೆಶಿ ಮತೀಯ ಶಕ್ತಿಗಳನ್ನ ಪ್ರೇರೆಪಿಸುವ ಕೆಲಸ ಮಾಡುತ್ತಿದ್ದಾರೆ- ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ.

ಡಿಕೆಶಿ ಮತೀಯ ಶಕ್ತಿಗಳನ್ನ ಪ್ರೇರೆಪಿಸುವ ಕೆಲಸ ಮಾಡುತ್ತಿದ್ದಾರೆ- ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ.

ಬೆಂಗಳೂರು,ಫೆಬ್ರವರಿ,9,2022(www.justkannada.in): ಡಿಕೆಶಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದರು.

ಮಾಧ್ಯಮಗಳ ಜತೆ ಮಾತನಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ರಾಷ್ಟ್ರಧ್ವಜವನ್ನು ಯಾರೂ ಇಳಿಸಿಲ್ಲ ಕೋರ್ಟ್ ವಿಧಾನಸೌಧದ ಮೇಲಷ್ಟೆ ರಾಷ್ಟ್ರಧ್ವಜ ಹಾರಿಸುತ್ತಾರೆ.  ದೇಶದಲ್ಲಿ ಕಾಂಗ್ರೆಸ್ ಇಲ್ಲ ಡಿಕೆ ಶಿವಕುಮಾರ್ ಇದೇ ರೀತಿ ಮಾತನಾಡುತ್ತಿದ್ದರೇ  ಅವರ ಪಕ್ಷವನ್ನ ಜನರು ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದು ಹರಿಹಾಯ್ದರು.

ವಿದ್ಯಾರ್ಥಿಗಳಲ್ಲಿ ಕೋಮು ಭಾವನೆ ಸೃಷ್ಠಿಸುವ  ಕೆಲಸ ಮಾಡುತಿದ್ದಾರೆ. ಮತೀಯ ಶಕ್ತಿಗಳನ್ನ ಪ್ರೇರೆಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.

Key words: dk shivakumar-home minister-Araga jnanendra