ಕರ್ನಾಟಕದಿಂದ ರಾಜ್ಯಸಭೆ ಪ್ರವೇಶಿಸುವಂತೆ ಪ್ರಿಯಾಂಕಾ ಗಾಂಧಿಗೆ ಡಿಕೆಶಿ ಆಹ್ವಾನ

ಬೆಂಗಳೂರು, ಮೇ 15, 2022 (www.justkannada.in): ಕರ್ನಾಟಕದಿಂದ ರಾಜ್ಯಸಭೆ ಪ್ರವೇಶಿಸುವಂತೆ ಕಾಂಗ್ರೆಸ್  ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

ಹೌದು. ಮುಂಬರುವ ರಾಜ್ಯಸಭಾ ಚುನಾವಣೆಗೆ ರಾಜ್ಯದಿಂದಲೇ ಸ್ಪರ್ಧಿಸುವಂತೆ ಪ್ರಿಯಾಂಕಾ ಗಾಂಧಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಆಹ್ವಾನಿಸಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದ ವೇಳೆ ಭೇಟಿಯಾಗಿದ್ದಾಗ ಡಿಕೆಶಿ ಈ ಪ್ರಸ್ತಾಪ ಇಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಚಿಂತನ ಶಿಬಿರ ನಡೆಯುತ್ತಿದೆ.

ಈ ವೇಳೆ ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾದ ಡಿಕೆಶಿ, ಮುಂಬರುವ ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದಲೇ ಸ್ಪರ್ಧಿಸುವಂತೆ ಪ್ರಿಯಾಂಕಾ ಗಾಂಧಿಯವರಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.