Friday, September 25, 2026

BDA Apartments

Home Front Page ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಕೆಶಿ ಕೈವಾಡ ಆರೋಪ: ಮೈಸೂರಿನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ.

ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಕೆಶಿ ಕೈವಾಡ ಆರೋಪ: ಮೈಸೂರಿನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ.

ಮೈಸೂರು,ಮೇ,8,2024 (www.justkannada.in): ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ  ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಕೆ ಶಿವಕುಮಾರ್  ಕೈವಾಡವಿದೆ ಎಂದು ಆರೋಪಿಸಿ ರಾಜ್ಯದ ಹಲವೆಡೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಗಿಳಿದಿದ್ದಾರೆ.

ರಾಮನಗರ ಮೈಸೂರು ದೇವನಹಳ್ಳಿಯಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದ್ದು ಈ ನಡುವೆ ಮೈಸೂರಿನಲ್ಲಿ ಶಾಸಕ ಜಿ.ಟಿ ದೇವೇಗೌಡರ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಮಾಜಿ ಶಾಸಕ ಸಾರಾ ಮಹೇಶ್ ಸೇರಿ ಹಲವು ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಕೆಶಿ ಕೈವಾಡ ಆರೋಪ: ಮೈಸೂರಿನಲ್ಲಿ ಜೆಡಿಎಸ್ ಬೃ...

ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಪೆನ್ ಡ್ರೈವ್ ಹಂಚಿದ ಮಹಾನಾಯಕನನ್ನ ಬಂಧಿಸಿ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ.

Key words: DK Shivakumar, JDS, protest, Mysore