ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜನವರಿ,12,2026 (www.justkannada.in): ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ಸ್ವಲ್ಪ ತಣ್ಣಗಾಗಿದ್ದು ಈ ಮಧ್ಯೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.

ಬೆಂಗಳೂರಿನ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುಮಾರು 45 ನಿಮಿಷಗಳ ಕಾಲ  ಚರ್ಚಿಸಿದ್ದಾರೆ ಎನ್ನಲಾಗಿದೆ. ರಾಜ್ಯ ರಾಜಕೀಯದ ಬಗ್ಗೆ ಖರ್ಗೆ ಜೊತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಚರ್ಚೆ ಬಳಿಕ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿಕೆ ಶಿವಕುಮಾರ್ ಇಬ್ಬರು ಒಟ್ಟಿಗೆ ಕಲಬುರಗಿಗೆ ಪ್ರಯಾಣ ಬೆಳೆಸಿದರು. ಕಲಬುರಗಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

Key words: DCM, DK Shivakumar, meets, Mallikarjun Kharge