Sunday, August 30, 2026

BDA Apartments

Home Front Page ರಾಜ್ಯಪಾಲರನ್ನ ಭೇಟಿಯಾದ ಡಿಕೆ ಶಿವಕುಮಾರ್: ಡಿಕೆ ಸುರೇಶ್ ಸಾಥ್

ರಾಜ್ಯಪಾಲರನ್ನ ಭೇಟಿಯಾದ ಡಿಕೆ ಶಿವಕುಮಾರ್: ಡಿಕೆ ಸುರೇಶ್ ಸಾಥ್

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದ ಮುಂದಿನ ಸಿಎಂ ಡಿಕೆ ಶಿವಕುಮಾರ್  ಎಂದು ಹೇಳಲಾಗುತ್ತಿದ್ದು ಈ ಮಧ್ಯೆ ಇಂದು ಡಿಕೆ ಶಿವಕುಮಾರ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿದ್ದಾರೆ.

ಲೋಕಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಅವರನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದು ಮಾಜಿ ಸಂಸದ ಡಿ.ಕೆ ಸುರೇಶ್ ಸಾಥ್ ನೀಡಿದ್ದಾರೆ.  ಮಧ್ಯಾಹ್ನ 1ರ ಬಳಿಕ ರಾಜ್ಯಪಾಲರು ಧರ್ಮಸ್ಥಳಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಡಿಕೆ ಶಿವಕುಮಾರ್ ಸಮಯ ಕೇಳಿದ್ದರು.

ಈ ಹಿನ್ನೆಲೆಯಲ್ಲಿ  ರಾಜ್ಯಪಾಲರನ್ನು ಭೇಟಿಯಾಗಿದ್ದು ಪ್ರಮಾಣ ವಚನದ ದಿನಾಂಕ ಸೇರಿ ಹಲವು ವಿಚಾರಗಳನ್ನ ಚರ್ಚಿಸುತ್ತಿದ್ದಾರೆ ಎನ್ನಲಾಗಿದೆ. ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಇದ್ದು, ಈ ವೇಳೆ ನೂತನ ಮುಖ್ಯಮಂತ್ರಿಯ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.

Key words: DK Shivakumar, meets, Governor