Saturday, September 5, 2026

BDA Apartments

Home Front Page ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಆಕಾಂಕ್ಷೆ ಹೊಂದಿದ್ದ ಕಾಂಗ್ರೆಸ್ ನಾಯಕ,  ಟ್ರಬಲ್ ಶೂಟರ್ ಎಂದೇ ಖ್ಯಾತಿ ಗಳಿಸಿರುವ ಡಿ.ಕೆ ಶಿವಕುಮಾರ್ ಅವರು  ಕೊನೆಗೂ ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್  ಇಂದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ,  ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್,  ಇನ್ಫೋಸಿಸ್ ನಾರಾಯಣಮೂರ್ತಿ,  ಸುಧಾಮೂರ್ತಿ ಅವರು ಸೇರಿ ಹಲವು ಉದ್ಯಮಿಗಳು ನಾಡಿನ ವಿವಿಧ ಮಠಾಧೀಶರು, ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಶಾಸಕರು ಸೇರಿ ಹಲವರು ಭಾಗಿಯಾಗಿದ್ದರು.

Key words: DK Shivakumar, sworn, state, new CM