ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಸಿಬಿಐ ತನಿಖೆಗೆ ಸರ್ಕಾರದ ಅನುಮತಿ ರದ್ದು ಕೋರಿ ಸಲ್ಲಿಸಿದ್ಧ ಅರ್ಜಿ ವಜಾ.

ಬೆಂಗಳೂರು,ಏಪ್ರಿಲ್,20,2023(www.justkannada.in):  ತಮ್ಮ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು.  ರಾಜ್ಯ ಸರ್ಕಾರದ ಅನುಮತಿಯನ್ನ ರದ್ದು ಮಾಡುವಂತೆ ಕೋರಿ ಡಿ.ಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನ ಎತ್ತಿ ಹಿಡಿದು ಡಿಕೆ ಶಿವಕುಮಾರ್ ಅವರ ಅರ್ಜಿ ವಜಾಗೊಳಿಸಿ ಸಿಬಿಐ ತನಿಖೆಗೆ ಅಸ್ತು ಎಂದಿದೆ.

Key words: DK Shivakumar -Petition -cancellation – government- permission – CBI- investigation -dismissed.