ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ, ಹೆಚ್.ಡಿಕೆ, ಬೊಮ್ಮಾಯಿ ಜಯಭೇರಿ: ಹಾಲಿ ಸಚಿವರಿಗೆ ಸೋಲು..   

ಬೆಂಗಳೂರು,ಮೇ,13,2023(www.justkannada.in): ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು 131 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಕಾಂಗ್ರೆಸ್ ಬಹುಮತ ಪಡೆದಿದೆ.

ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಕೆ ಶಿವಕುಮಾರ್,  ವರುಣಾದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ, ಚನ್ನಪಟ್ಟಣದಲ್ಲಿ ಹೆಚ್.ಡಿ ಕುಮಾರಸ್ವಾಮಿ, ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ.

ಹಲವು ಹಾಲಿ ಸಚಿವರಿಗೆ ಸೋಲು…

ಹಾಲಿ ಸಚಿವರಾಗಿದ್ದ ಹಲವರು ಸೋಲನುಭವಿಸಿದ್ದಾರೆ. ಡಾ.ಕೆ.ಸುಧಾಕರ್,  ಗೋವಿಂದ ಕಾರಜೋಳ, ನಾರಾಯಣಗೌಡ, ಕನಕಪುರ ಕ್ಷೇತ್ರದಲ್ಲಿ ಆರ್.ಅಶೋಕ್, ಜೆ.ಸಿ ಮಾಧುಸ್ವಾಮಿ, ಎಂಟಿಬಿ ನಾಗರಾಜ್, ಸಚಿವ ವಿ. ಸೋಮಣ್ಣ, ಗೋವಿಂದ್ ಕಾರಜೋಳ ಸೋಲನುಭವಿಸಿದ್ದಾರೆ.

ಗೆದ್ದವರ ಪಟ್ಟಿ ಹೀಗಿದೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು

ಕಾಂಗ್ರೆಸ್​ನ ಡಿ.ಕೆ.ಶಿವಕುಮಾರ್​ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಶಾಲಿಗಳಾಗಿದ್ದಾರೆ.

ಬಿಜೆಪಿಯ ಬಿ.ಶ್ರೀರಾಮುಲು ಅವರು ಬಳ್ಳಾರಿ ಗ್ರಾಮಾಂತರದಲ್ಲಿ ಸ್ಪರ್ಧಿಸಿ  ಸೋತಿದ್ದಾರೆ.  21,000 ಮತಗಳ ಅಂತರದಿಂದ ಕಾಂಗ್ರೆಸ್​ನ​ ಬಿ.ನಾಗೇಂದ್ರ ಗೆದ್ದಿದ್ದಾರೆ.

ಶಿವಾಜಿನಗರದಲ್ಲಿ ರಿಜ್ವಾನ್ ಅರ್ಷದ್ ಜಯ

ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ವಿ.ಸೋಮಣ್ಣಗೆ ಸೋಲು. ಕಾಂಗ್ರೆಸ್​ನ ಸಿ.ಪುಟ್ಟರಂಗಶೆಟ್ಟಿಗೆ ಗೆಲುವು

ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ​ ಜಮೀರ್ ಅಹ್ಮದ್​ ಜಯಭೇರಿ

ಅಥಣಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ​ ಲಕ್ಷ್ಮಣ ಸವದಿ ಜಯ. ​ ಲಕ್ಷ್ಮಣ ಸವದಿಯವರು 59,000ಕ್ಕೂ ಹೆಚ್ಚು ಮತಗಳ ಅಂತರದಿಂದ  ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಅವರನ್ನು ಸೋಲಿಸಿದ್ದಾರೆ.

ಚಿತ್ತಾಪುರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್​ ಖರ್ಗೆ16,000 ಮತಗಳ ಅಂತರದಿಂದ ಜಯ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್​ ಗೆದ್ದಿದ್ದಾರೆ

ಶ್ರೀನಿವಾಸಪುರ ಕ್ಷೇತ್ರದ ಮಾಜಿ ಸ್ಪೀಕರ್​ ರಮೇಶ್ ಕುಮಾರ್ ಸೋತಿದ್ದಾರೆ. ಜೆಡಿಎಸ್​ ವೆಂಕಟಶಿವಾರರೆಡ್ಡಿ ಅವರಿಗೆ ಜಯವಾಗಿದೆ.

ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು 160 ಮತಗಳ ಅಂತರದಿಂದ ಗೆದ್ದಾರಿದ್ದಾರೆ.

ರಾಮನಗರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಸೋಲುಂಡಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಇಕ್ಬಾಲ್ ಹುಸೇನ್ ಜಯ ಭಾರಿಸಿದ್ದಾರೆ

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧುಸ್ವಾಮಿ ಅವರು ಸೋಲಾಗಿದೆ.  ಜೆಡಿಎಸ್​  ಅಭ್ಯರ್ಥಿ ಸುರೇಶ್ ಬಾಬು ಅವರಿಗೆ ಜಯವಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್​ಗೆ ಹೀನಾಯವಾಗಿ ಸೋತಿದ್ದು, ಕಾಂಗ್ರೆಸ್​ನ ಪ್ರದೀಪ್​ ಈಶ್ವರ್ ಅಯ್ಯರ್​ ಜಯಭೇರಿ ಭಾರಿಸಿದ್ದಾರೆ.

ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಎನ್.ಎ.ಹ್ಯಾರಿಸ್​ಗೆ ಜಯ

ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಯನ ಮೋಟಮ್ಮ ಗೆದ್ದಿದ್ದಾರೆ.

ಗಾಂಧಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ದಿನೇಶ್ ಗುಂಡೂರಾವ್ ಗೆಲುವು ಸಾಧಿಸಿದ್ದಾರೆ.

ಮುಧೋಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಚಿವ ಗೋವಿಂದ ಕಾರಜೋಳ ಅವರು ಹೀನಾಯವಾಗಿ ಸೋತಿದ್ದಾರೆ. ಆರ್​.ಬಿ.ತಿಮ್ಮಾಪುರ 16 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ.

Key words: DK Shivakumar- Siddaramaiah- HD Kumaraswamy-won