Tuesday, October 20, 2026

Dasara Wishes

Happy Dasara
Home Front Page ‘ಬಡವರ ಬಂಧು, ಸಾಮಾಜಿಕ ನ್ಯಾಯದ ಹರಿಕಾರ’-ಸಿದ್ಧರಾಮಯ್ಯ ಸೇವೆ ಶ್ಲಾಘಿಸಿದ ಡಿಕೆ ಶಿವಕುಮಾರ್

‘ಬಡವರ ಬಂಧು, ಸಾಮಾಜಿಕ ನ್ಯಾಯದ ಹರಿಕಾರ’-ಸಿದ್ಧರಾಮಯ್ಯ ಸೇವೆ ಶ್ಲಾಘಿಸಿದ ಡಿಕೆ ಶಿವಕುಮಾರ್

ಬೆಂಗಳೂರು,ಮೇ,29,2026 (www.justkannada.in):  ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೆ ಇದೀಗ ಮಾಜಿ ಡಿಸಿಎಂ ಡಿಕೆ ಶಿವಕುಮಾರ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಢಿ ಸಿದ್ದರಾಮಯ್ಯನವರ ರಾಜಕೀಯ ಸೇವೆಯನ್ನ ಶ್ಲಾಘಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್, ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು.

ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ ಎಂದು ಡಿಕೆ ಶಿವಕುಮಾರ್ ಗುಣಗಾನ ಮಾಡಿದ್ದಾರೆ.

ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ.

ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Key words: social justice, DK Shivakumar, praises, Siddaramaiah,  service