Monday, September 14, 2026

BDA Apartments

ಇಂದು ದೆಹಲಿಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ BDA JK_Adv BDA Adv
Home Front Page ಇಂದು ದೆಹಲಿಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ

ಇಂದು ದೆಹಲಿಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ

ಬೆಂಗಳೂರು,ಜೂನ್,1,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಈಗಾಗಲೇ ತಿಳಿದು ಬಂದಿದೆ. ಈ ಮಧ್ಯೆ ಸಂಪುಟ ರಚನೆ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಯೋಜಿತ ಸಿಎಂ ಡಿಕೆ ಶಿವಕುಮಾರ್, ನಾನು ಸಿದ್ದರಾಮಯ್ಯ ಇಬ್ಬರು ದೆಹಲಿಗೆ ಹೋಗುತ್ತಿದ್ದೇವೆ ಎಂದಿದ್ದಾರೆ.  ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಒಟ್ಟಿಗೆ ಒಂದೇ ವಿಮಾನದಲ್ಲಿ ತೆರಳಲಿದ್ದಾರೆ ಎನ್ನಲಾಗಿದೆ.

ಸಚಿವ ಸಂಪುಟ ರಚನೆ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮಗೊಳಿಸಲಾಗುತ್ತಿದ್ದು, ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಸಂಪುಟ ರಚನೆ ಸವಾಲಾಗಿ ಪರಿಣಮಿಸಿದೆ. ಬುಧವಾರ ನಡೆಯಲಿರುವ ಡಿಕೆಶಿ ಸಿಎಂ ಪದಗ್ರಹಣ ಸಮಾರಂಭದ ವೇಳೆ ಸಂಪುಟ ಸದಸ್ಯರೂ ಪ್ರಮಾಣವಚನ ಸ್ವೀಕರಿಸಲು ಯೋಚಿಸಲಾಗಿದೆ.ಇಂದು ದೆಹಲಿಗೆ ಡಿಕೆ ಶಿವಕುಮಾರ್ jk02_new jk02 new

Key words: DK Shivakumar, Siddaramaiah, Delhi, today