Friday, October 9, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಡಿ.ಕೆ ಶಿವಕುಮಾರ್ ಭೇಟಿ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಡಿ.ಕೆ ಶಿವಕುಮಾರ್ ಭೇಟಿ.

ಬೆಂಗಳೂರು,ಏಪ್ರಿಲ್,1,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಈ ನಡುವೆ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಚರ್ಚಿಸಿದರು.

ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಆಯ್ಕೆ ಕಗ್ಗಂಟು ಮತ್ತು  ಏಪ್ರಿಲ್ 9 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ ಸೇರಿ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು ಎನ್ನಲಾಗಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಡಿ.ಕೆ ಶಿವಕುಮಾರ್ ಭೇಟಿ ...

ಇನ್ನು ಚರ್ಚೆ ಬಳಿಕ ಮಲ್ಲಿಕಾರ್ಜುನ ಖರ್ಗೆ  ಏರ್ ಪೋರ್ಟ್ ಗೆ ತೆರಳಿದರು.  ಒಂದೇ ಕಾರಿನಲ್ಲಿ ಇಬ್ಬರು ನಾಯಕರು ತೆರಳಿದರು ಎನ್ನಲಾಗಿದೆ.

Key words: DK Shivakumar -visits -AICC President- Mallikarjuna Kharge-residence.