ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೆ ಕಾಂಗ್ರೆಸ್ ಪಕ್ಷದ ಬಗ್ಗೆ ಭವಿಷ್ಯ ನುಡಿದ ಸಚಿವ ಕೆ.ಎಸ್ ಈಶ್ವರಪ್ಪ…

ಬೆಂಗಳೂರು,ಮಾ,11,2020(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕವಾದ ಬೆನ್ನಲ್ಲೆ ಕಾಂಗ್ರೆಸ್ ಪಕ್ಷದ ಬಗ್ಗೆ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಬಗ್ಗೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್​ ಅವರನ್ನು ನೇಮಕ ಮಾಡಿರುವುದು ಆಶ್ಚರ್ಯ ತಂದಿದೆ. ಕಾಂಗ್ರೆಸ್ ವಿಭಜನೆಯಾಗುತ್ತೆ. ಯಾವುದೇ ಅನುಮಾನವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಡಿಕೆ.ಶಿವಕುಮಾರ್ ಪಕ್ಷದ ನಾಯಕರ ವಿರೋಧದ ನಡುವೆ ಅಧ್ಯಕ್ಷರಾಗಿರುವುದು ಮತ್ತೊಮ್ಮೆ ಗುಂಪುಗಾರಿಕೆ ಹೊರಬರಲಿದೆ. ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಯಾವಾಗ ಹೊರಬರುತ್ತೋ ಗೊತ್ತಿಲ್ಲ. ಡಿ.ಕೆ ಶಿವಕುಮಾರ್ ಈಗಾಗಲೇ ಪಕ್ಷದಲ್ಲಿ ಹಿಡಿತ ಸಾಧಿಸಲು ಮುಂದಾಗಿದ್ದಾರೆ. ಆದರೆ ಅವರನ್ನ ಮುಂದುವರೆಯಲು ಕಾಂಗ್ರೆಸ್ ನಲ್ಲಿ ಬಿಡಲ್ಲ ಎಂದು ಭವಿಷ್ಯ ನುಡಿದರು.

Key words: DK Sivakumar -appointed -KPCC president-Minister- KS Eshwarappa -predicted -Congress party.