ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮಳೆಯನ್ನೂ ಲೆಕ್ಕಿಸದೆ ಮಾಜಿ ಸಚಿವರ ನೇತೃತ್ವದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ…

ಚಾಮರಾಜನಗರ,ಸೆ,4,2019(www.justkannada.in):  ಜಾರಿ ನಿರ್ದೇಶನಾಲಯದಿಂದ  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧಿಸಿರುವುದನ್ನ ಖಂಡಿಸಿ ಚಾಮರಾಜನಗರದಲ್ಲಿ ಕಾಂಗ್ರೆಸ ಕಾರ್ಯಕರ್ತರು ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದರು.

ಶಾಸಕ ಹಾಗೂ ಮಾಜಿ ಸಚಿವ  ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ ನೇತೃತ್ವದಲ್ಲಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು  ಬೃಹತ್ ಪ್ರತಿಭಟನೆ ನಡೆಸಿದರು.  ರಾಷ್ಟ್ರೀಯ ಹೆದ್ದಾರಿ -209ರ ಸಂಚಾರ ತಡೆದು ಪ್ರತಿಭಟನಾಕಾರರು ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಮಳೆ ಸುರಿಯುತ್ತಿದ್ದರೂ ಮಳೆಯನ್ನು ಲೆಕ್ಕಸದೇ ಕಾಂಗ್ರೆಸ್ ಕಾರ್ಯಕರ್ತರು ಮಳೆ ಯಲ್ಲೇ ಪ್ರತಿಭಟನೆ ಮಾಡಿದರು. ಸುಮಾರು 40 ನಿಮಿಷಗಳ ಕಾ ಲ ಮಳೆಯಲ್ಲೇ ನೆನೆದು ಧರಣಿ ನಡೆಸಿದರು. ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಿಂದ ರಸ್ತೆ ಸಚಾರ ಅಸ್ತವ್ಯಸ್ತಗೊಂಡಿತ್ತು.

Key words: DK Sivakumar- arrest – massive protest –rains-chamarajanagar