ಆರ್.ಧೃವನಾರಾಯಣ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಬಿಕ್ಕಿ ಬಿಕ್ಕಿ ಅತ್ತ ಡಿ.ಕೆ ಸುರೇಶ್

ಮೈಸೂರು,ಮಾರ್ಚ್,11,2023(www.justkannda.in):  ಹೃದಯಾಘಾತದಿಂದ ಇಂದು ಬೆಳಿಗ್ಗೆ ವಿಧಿವಶರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಅವರ ಪಾರ್ಥಿವ ಶರೀರವನ್ನ ಜಿಲ್ಲಾ ಕಾಂಗ್ರೆಸ್ ಗೆ ರವಾನಿಸಲಾಗಿದ್ದು ಕಾಂಗ್ರೆಸ್ ನಾಯಕರು ಸೇರಿ ಹಲವರು ಅಂತಿಮ ದರ್ಶನ ಪಡೆದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್, ಸಂಸದ ಡಿ.ಕೆ ಸುರೇಶ್ ಅವರು ಆರ್.ಧೃವನಾರಾಯಣ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಅಂತಿಮ ದರ್ಶನ ಪಡೆಯುವ ವೇಳೆ ಸಂಸದ ಡಿ.ಕೆ ಸುರೇಶ್ ಆರ್.ಧೃವನಾರಾಯಣ್ ಅವರನ್ನ ನೆನೆದು ಬಿಕ್ಕಿ ಬಿಕ್ಕಿ ಅತ್ತ ದೃಶ್ಯ ಕಂಡು ಬಂದಿತು. ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ನಂತರ ಮೆರವಣಿಗೆ ನಡೆಸಿ ಹುಟ್ಟೂರಿಗೆ ಧ್ರುವನಾರಾಯಣ್ ಪಾರ್ಥೀವ ಶರೀರ ರವಾನಿಸಲಾಗುತ್ತದೆ.

Key words: DK Suresh-received – last darshan – R. Dhruvanarayan