ಒಂದು ದಿನ ಮಳೆ ಆಗದಿದ್ರೆ ಸರ್ಕಾರಕ್ಕೆ 1 ಸಾವಿರ ಕೋಟಿ ರೂ. ನಷ್ಟ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಳಗಾವಿ,ಅಕ್ಟೋಬರ್,19,2023(www.justkannada.in): ಈ ವರ್ಷ ರಾಜ್ಯದಲ್ಲಿ ಮಳೆ ಅಭಾವ ಆಗಿದೆ. ಒಂದು ದಿನ ಮಳೆ ಆಗದಿದ್ರೆ ಸರ್ಕಾರಕ್ಕೆ 1 ಸಾವಿರ ಕೋಟಿ ನಷ್ಟವಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಸರ್ಕಾರ ಮುತುವರ್ಜಿ ವಹಿಸಿದೆ. ಸಚಿವ ಕೆ.ಜೆ.ಜಾರ್ಜ್​ ಜೊತೆಗೆ ಪಾವಗಡಕ್ಕೆ ಹೋಗಿ ವಿವರಣೆ ನೀಡಿದ್ದೇವೆ. ಮೊದಲು ರೈತರಿಗೆ 6 ಗಂಟೆ ವಿದ್ಯುತ್ ವಿತರಣೆ ‌ಮಾಡಲಾಗುತ್ತಿತ್ತು. ಸಿಎಂ ಜೊತೆ ಚರ್ಚಿಸಿ ನಮ್ಮ ಸರ್ಕಾರ 7 ಗಂಟೆ ವಿದ್ಯುತ್ ‌ನೀಡುತ್ತಿತ್ತು. ಈಗ ರೈತರಿಗೆ ಸ್ವಲ್ಪ ಕಷ್ಟವಾಗುತ್ತಿದೆ. ನೀರು ಕಳ್ಳತನ ‌ಆಗುತ್ತಿರುವುದಕ್ಕೆ ಸರ್ಕಾರಕ್ಕೆ ದೊಡ್ಡ ಭಾರ ಆಗುತ್ತಿದೆ. ಮೈಸೂರು ಭಾಗದ ಜನರನ್ನು ದೇವರೇ ಕಾಪಾಡಬೇಕು ಎಂದು ಹೇಳಿದರು.

ಸತೀಶ್ ಜಾರಕಿಹೊಳಿ ಮತ್ತು ತಮ್ಮ ನಡುವೆ ಆಂತರಿಕ ಭಿನ್ನಾಭಿಪ್ರಾಯ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ನನಗೆ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ. ಆಂತರಿಕವಾಗಿಯೂ ಇಲ್ಲ, ಬಹಿರಂಗವಾಗಿಯೂ ಇಲ್ಲ. ನನಗೆ ಯಾಕೆ ಭಿನ್ನಾಭಿಪ್ರಾಯ ಬೇಕು ಎಂದರು.

Key words: doesn’t -rain – government – lose 1 thousand- crores-  DCM DK Shivakumar.