ಜನವರಿ 22ರಂದು ಅಯೋಧ್ಯೆಗೆ ಬರಬೇಡಿ: ರಾಮಮಂದಿರ ಟ್ರಸ್ಟ್

ಬೆಂಗಳೂರು, ಡಿಸೆಂಬರ್ 17, 2023 (www.justkannada.in): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬಹುತೇಕ ಸಿದ್ಧವಾಗಿದ್ದು, ಜನವರಿ 22 ರಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ಜನವರಿ 22 ರಂದು ಮಧ್ಯಾಹ್ನ 12 ಗಂಟೆಗೆ ಸಮಾರಂಭ ನಡೆಯಲಿದೆ. ಹೀಗಾಗಿ ಅಂದು ಯಾವ ಭಕ್ತರು ಅಯೋಧ್ಯೆಗೆ ಆಗಮಿಸಬಾರದು ಎಂದು ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ಈ ಕುರಿತು ಭಕ್ತರಿಗೆ ನೀಡಿದ ಸಂದೇಶದಲ್ಲಿ ಅವರು, “ಜನವರಿ 22 ರಂದು ಅಯೋಧ್ಯೆಗೆ ಬರಬೇಡಿ. ನಿಮಗೆ ಹತ್ತಿರವಿರುವ ದೇವಸ್ಥಾನದಲ್ಲಿ ಸಂಭ್ರಮ ಆಚರಿಸಿ ಎಂದು ಮಾಹಿತಿ ನೀಡಿದ್ದಾರೆ.

ಅಂದಹಾಗೆ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಪಟ್ಟಣದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.